Badagabettu Society

ಇಂದ್ರಾಳಿ ಜಯಕರ ಶೆಟ್ಟಿಯವರ ಅಧ್ಯಕ್ಷತೆಯ ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ ಗೆ ಸತತ 18ನೇ ಬಾರಿಗೆ ಸಾಧನಾ ಪ್ರಶಸ್ತಿ.

ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ ನಿ. ಉಡುಪಿ ಇದರ 2023-24ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 18 ಬಾರಿ ಹಾಗೂ ಸಂಸ್ಥೆಯು 2023/24 ವರದಿ ವರ್ಷದಲ್ಲಿ 500 ಕೋಟಿಗೂ ಮಿಕ್ಕಿ ಠೇವಣಿ ಸಂಗ್ರಹಣೆಗಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಕೊಡಲ್ಪಡುವ ಚಿನ್ನದ ಪದಕ ಲಭಿಸಿದೆ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ| ಎಂ . ಎನ್. ರಾಜೇಂದ್ರ ಕುಮಾರ್ ರವರಿಂದ ಬ್ಯಾಂಕಿನ ಅಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ ಹಾಗೂ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಶೇರಿಗಾರ್ ಪ್ರಶಸ್ತಿಯನ್ನು ಸ್ವೀಕರಿಸಿದರು.ಈ ಸಂದರ್ಬದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಜಾರ್ಜ್ ಸ್ಯಾಮ್ಯುವೆಲ್ ,ಆಡಳಿತ ಮಂಡಳಿಯ ಸದಸ್ಯರು, ಸಂಸ್ಥೆಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.