ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಉಡುಪಿ ಹಾಗೂ ಸಹಕಾರ ಇಲಾಖೆಯ ಉಡುಪಿ ಜಿಲ್ಲಾ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಅಂಗವಾಗಿ ಮಣಿಪಾಲ ಪ್ರಗತಿ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಡಾ.ವಿ ಎಸ್ ಆಚಾರ್ಯ ಜಿಲ್ಲಾ ಕೇಂದ್ರ ತರಬೇತಿ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಹಾಗೂ ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ನ ಮತ್ತು ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉಡುಪಿ ಅಧ್ಯಕ್ಷ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯ ಕ್ರಮದಲ್ಲಿ ಲಯನ್ ಪಿಡಿಜಿ ಎನ್.ಎಂ ಹೆಗ್ಡೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಖಜಾಂಚಿ ಹರಿಪ್ರಸಾದ್ ರೈ, ಜಿಲ್ಲಾ ಕಾರ್ಯದರ್ಶಿ ಆನಂದ ಬಿ. ಅಡಿಗ, ರಾಜ್ಯ ಸಹಾಯಕ ಆಯಿಕ್ತೆ ಸುಮನಾ ಶೇಖರ್, ಅಲೆವೂರು ಗ್ರಾಮ ಪಂಚಾಯತ್ನ ಅಧ್ಯಕ್ಷ ಯತೀಶ್ ಕುಮಾರ್, ಯೋಗ ಶಿಕ್ಷಕಿಯರಾದ ಚೆನ್ನಮ್ಮ ಉಡುಪ ಹಾಗೂ ಶೋಭಾ ಶೆಟ್ಟಿ, ಉಡುಪಿ ಗೈಡ್ ಕಮೀಶನರ್ ಜ್ಯೋತಿ ಪೈ, ಬಡಗಬೆಟ್ಟು ಕ್ರೆಡಿಟ್ ಕೋ–ಆಪರೇಟಿವ್ ಸೊಸೈಟಿ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಉಪಸ್ಥಿತರಿದ್ದರು
ಕಾರ್ಯಕ್ರಮದ ನಿರೂಪಣೆಯನ್ನು ಬಡಗಬೆಟ್ಟು ಸೊಸೈಟಿಯ ಮ್ಯಾನೇಜರ್ ಶ್ರೀ ನವೀನ್ ಕೆ. ನೆರವೇರಿಸಿದರು. ಶ್ರೀಮತಿ ಅನುಷಾ ಕೋಟ್ಯಾನ್ ಅವರು ಅತಿಥಿಗಳನ್ನು ಸ್ವಾಗತಿಸಿದರೆ, ಶ್ರೀ ಪ್ರವೀಣ್ ಕುಮಾರ್ ವಂದಿಸಿದರು.



