Badagabettu Society

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ

ಪರ್ಯಾಯ ಶ್ರೀಕೃಷ್ಣಮಠದ ಆಶ್ರಯದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್, ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಇವರ ಸಹಭಾಗಿತ್ವದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಹಾಗು ಮಹಿಳಾ ವೈದ್ಯರ ಘಟಕ, ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಹಾಗೂ ಎ.ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಇಲ್ಲಿನ ತಜ್ಞ ವೈದ್ಯರುಗಳ ಸಮ್ಮಿಲನದಲ್ಲಿ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರವು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿತು. ಶಿಬಿರವನ್ನು ಪರಮಪೂಜ್ಯ ಪರ್ಯಾಯ ಶ್ರೀಪಾದರಾದ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. “ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕಾಂಶ ಆಹಾರದ ಅಗತ್ಯತೆ” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು. ಎಲ್ಲಾ ತರಹದ ಆರೋಗ್ಯ, ದಂತ, ಕಣ್ಣಿನ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ಗರ್ಭಕಂಠದ ಸ್ತಿçÃಯರ ಪರೀಕ್ಷೆ, ಎಲುಬಿನ ಸಾಂದ್ರತೆ ಪರೀಕ್ಷೆಗಳನ್ನು ತಜ್ಞ ವೈದ್ಯರಿಂದ ನಡೆಸಲಾಯಿತು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಬಡಗಬೆಟ್ಟು ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ ಶೇರಿಗಾರ್, ಎ.ಜಿ.ಎಂ ಪ್ರವೀಣ್ ಕುಮಾರ್, ರತ್ನಾಕರ್ ಇಂದ್ರಾಳಿ ಇತರ ಪ್ರಮುಖರು ಉಪಸ್ಥಿತರಿದ್ದರು.