ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಹಭಾಗಿತ್ವದಲ್ಲಿ, ಶಿರ್ವ ಅಟ್ಟಿಂಜೆ ದಿ| ಶಂಭು ಶೆಟ್ಟಿ ಅವರ ಸ್ಮರಣಾರ್ಥ ಶಿರ್ವ ಬಂಟರ ಸಂಘದ ನೇತೃತ್ವದಲ್ಲಿ ಉಡುಪಿ ಜಿಲ್ಲಾಸ್ಪತ್ರೆ ಹಾಗೂ ಪರಿಸರದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರವು ಆ.9 ರಂದು ಶಿರ್ವ ಕೊಲ್ಲಬೆಟ್ಟು ಸಂಘಮಿತ್ರ ಹಾಲ್‌ನಲ್ಲಿ ನಡೆಯಿತು.
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ಶ್ರೀ ರಾಜೇಶ್ ವಿ. ಶೇರಿಗಾರ್ ಮತ್ತು ಉಡುಪಿ ಜಿಲ್ಲಾಸ್ಪತ್ರೆಯ ಡಾ| ವೀಣಾ ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು.
ಸಮಾಜ ಸೇವಕ ಮನೋಹರ ಶೆಟ್ಟಿ ಮಂದಾರ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಸಮಾಜಮುಖಿಯಾಗಿ ಸಾರ್ಥಕ ಬದುಕನ್ನು ಸಾಗಿಸಿದ ದಿ| ಶಂಭು ಶೆಟ್ಟಿ ಅವರ ಸ್ಮರಣಾರ್ಥ ಪರಿಸರದ ಸಂಘ ಸಂಸ್ಥೆಗಳು ರಕ್ತದಾನ ಶಿಬಿರವನ್ನು ಆಯೋಜಿಸಿರುವುದು ಶ್ಲಾಘನೀಯ ಎಂದರು.
ಉಡುಪಿಯ ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, 90 ವರ್ಷಗಳ ಸಾರ್ಥಕ ಜೀವನ ನಡೆಸಿ ಸಮಾಜಕ್ಕಾಗಿ ತನ್ನದೇ ಆದ ಕೊಡುಗೆಯನ್ನು ನೀಡಿದ ಶಂಭು ಶೆಟ್ಟಿಯವರ ಸ್ಮರಣಾರ್ಥ ನಡೆದ ಶಿಬಿರದ ಪ್ರಯೋಜನವನ್ನು ರಕ್ತದ ಅಗತ್ಯತೆ ಇದ್ದವರು ಪಡೆಯುವಂತಾಗಲಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಿರ್ವ ಬಂಟರ ಸಂಘದ ಅಧಕ್ಷ ಕುತ್ಯಾರು ಸಾಯಿನಾಥ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ದಿ| ಶಂಭು ಶೆಟ್ಟಿ ಅವರ ಪತ್ನಿ ಹೇಮಲತಾ ಶಂಭು ಶೆಟ್ಟಿ ಮತ್ತು ಮಕ್ಕಳು, ಮಾಜಿ ಉಡುಪಿ ನಗರಸಭಾಧ್ಯಕ್ಷ ಕಿರಣ್ ಕುಮಾರ್, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ರಕ್ತದಾನಿಗಳಿಂದ ಒಟ್ಟು 126 ಯುನಿಟ್ ರಕ್ತ ಸಂಗ್ರಹವಾಯಿತು.





