ಮಂಗಳೂರಿನಲ್ಲಿ ಜರಗಿದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಸಾಧನೆಗಾಗಿ 9ನೇ ಬಾರಿಗೆ ರಾಜ್ಯ ಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಯನ್ನು ಪಡೆದಿರುತ್ತದೆ. ಸಂಘದ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿಯವರು ಗಣ್ಯರ ಸಮಕ್ಷಮ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಸಚಿವರಾದ ಶ್ರೀ ಕೆ.ಎನ್ ರಾಜಣ್ಣ, ರಾಜ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಶ್ರೀ ಜಿ ಟಿ ದೇವೇಗೌಡ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್, ಶಾಸಕರಾದ ವೈ ಭರತ್ ಶೆಟ್ಟಿ, ಯಶ್ಪಾಲ್ ಸುವರ್ಣ, ದ.ಕ ಜಿಲ್ಲಾ ಸಹಕಾರ ಯೂನಿನನ್ನ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಕೆ.ಎಂ.ಎಫ್ ಅಧ್ಯಕ್ಷರಾದ ಶ್ರೀ ಕೆ.ಪಿ ಸುಚರಿತ ಶೆಟ್ಟಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಮಂಡಳಿ ಸದಸ್ಯರು ಹಾಗೂ ಇತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

