72ನೇ ಅಖಿಲ ಭಾರತ ಸಹಕಾರ ಸಪ್ತಾಹ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಬಡಗಬೆಟ್ಟು ಸಹಕಾರ ಸಂಘವು ‘ಸಹಕಾರ ಮಾಣಿಕ್ಯ’ ಪ್ರಶಸ್ತಿಯನ್ನು ಪಡೆದು ವಿಶಿಷ್ಟ ಸಾಧನೆ ಮಾಡಿದೆ.
ಈ ಗೌರವದ ಭಾಗವಾಗಿ ಸಂಘಕ್ಕೆ ₹10,000 ನಗದು ಬಹುಮಾನ ಹಾಗೂ 5 ಗ್ರಾಂ ಬಂಗಾರದ ಪದಕ ಪ್ರದಾನ ಮಾಡಲಾಗಿದೆ.
ಸಹಕಾರ ಕ್ಷೇತ್ರದಲ್ಲಿ ಸಂಘದ ಸೇವೆ, ಉತ್ತಮ ನಿರ್ವಹಣೆ ಮತ್ತು ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯು ಲಭಿಸಿದ್ದು, ಬಡಗಬೆಟ್ಟು ಸೊಸೈಟಿಯು “ಸಹಕಾರ ಮಾಣಿಕ್ಯ” ಪ್ರಶಸ್ತಿ ಪಡೆದ ಉಡುಪಿ ಜಿಲ್ಲೆಯ ಪ್ರಥಮ ಕ್ರೆಡಿಟ್ ಸಹಕಾರ ಸಂಘವಾಗಿರುತ್ತದೆ. ಸಂಘದ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ, ಪ್ರಧಾನ ವ್ಯವಸ್ಥಾಪಕರಾದ ಶ್ರೀ ರಾಜೇಶ್ ವಿ. ಶೇರಿಗಾರ್‌ರವರು ಗಣ್ಯರ ಸಮಕ್ಷಮ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಸನ್ಮಾನ್ಯ ಯು.ಟಿ ಖಾದರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಶ್ರೀ ಜಿ.ಟಿ ದೇವೇಗೌಡ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್, ಕರ್ನಾಟಕ ವಿಧಾನ ಪರಿಷತ್ ಸದಸ್ಯರುಗಳಾದ ಮಂಜುನಾಥ ಭಂಡಾರಿ, ಐವನ್ ಡಿ’ಸೋಜ, ಕಿಶೋರ್ ಕುಮಾರ್ ಬೊಟ್ಯಾಡಿ, ಶಾಸಕರಾದ ವೇದವ್ಯಾಸ ಕಾಮತ್, ಯಶ್‌ಪಾಲ್ ಸುವರ್ಣ, ಸಹಕಾರ ಇಲಾಖಾಧಿಕಾರಿಗಳು, ಜಿಲ್ಲಾ ಯೂನಿಯನ್ ಅಧ್ಯಕ್ಷರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಮಂಡಳಿ ಸದಸ್ಯರು ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.




































