Badagabettu Society

ಸಂಘದ ಸಿಬ್ಬಂದಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ

ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಿಬ್ಬಂದಿಗಳಿಗೆ ಸೊಸೈಟಿಯ ವತಿಯಿಂದ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರವು ಉಡುಪಿ ನಗರದ ಹೋಟೆಲ್ ಡಯಾನ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಮಂಗಳೂರಿನ ಹೆಸರಾಂತ ತರಬೇತಿ ಸಂಸ್ಥೆಯಾದ ಮಾಸ್ಟರ್‌ಮೈಂಡ್ ಎಂಟರ್‌ಪ್ರೆöÊಸಸ್‌ನ ಶ್ರೀಶ ಕೆ.ಎಂ ಇವರು ಸಂಘದ ಸಿಬ್ಬಂದಿಗಳಿಗೆ ತರಬೇತಿ ನೀಡಿದರು.

ಸಂಘದ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರು ಕಾರ್ಯಕ್ರಮ ಉದ್ಘಾಟಿಸಿ ಗ್ರಾಹಕರೇ ನಮ್ಮ ದೇವರು. ಆಧುನಿಕ ಬದಲಾವಣೆಗಳಿಗೆ ಒಗ್ಗಿಕೊಂಡು ಒತ್ತಡ ನಿರ್ವಹಣೆ, ಕೌಶಲ್ಯಾಭಿವೃದ್ಧಿಯೊಂದಿಗೆ ಗ್ರಾಹಕರಿಗೆ ನಗುಮುಖದ ಉತ್ತಮ ಸೇವೆ ನೀಡುವರೇ ಇಂತಹ ತರಬೇತಿಗಳು ಅತ್ಯಗತ್ಯ ಎಂದರು.

ಕಾರ್ಯಕ್ರಮದಲ್ಲಿ 2024-25ನೇ ಸಾಲಿನಲ್ಲಿ ನೀಡಿದಂತಹ ಗುರಿಯನ್ನು ಸಾಧಿಸಿದ ವಿವಿಧ ಶಾಖೆಗಳನ್ನು ಗುರುತಿಸಿ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷರಾದ ಜಾರ್ಜ್ ಸಾಮ್ಯುವೆಲ್, ನಿರ್ದೇಶಕರಾದ ಪುರುಷೋತ್ತಮ ಪಿ. ಶೆಟ್ಟಿ, ಸದಾಶಿವ ನಾಯ್ಕ್, ಮಾಸ್ಟರ್ ಮೈಂಡ್ ಎಂಟರ್‌ಪ್ರೆöÊಸಸ್‌ನ ವಿ.ಕೆ ಹೆಬ್ಬಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ ಸ್ವಾಗತಿಸಿ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಮಲ್ಪೆ ಶಾಖಾ ವ್ಯವಸ್ಥಾಪಕರಾದ ನವೀನ್ ಕೆ ವಂದಿಸಿದರು.

ಉಡುಪಿಯ ಪ್ರತಿಷ್ಠಿತ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ 2024–25 ರಲ್ಲಿ ವಾರ್ಷಿಕ ₹2,935 ಕೋಟಿ ವಹಿವಾಟು ನಡೆಸಿ ₹19.37 ಕೋಟಿ ಲಾಭ ಗಳಿಸಿದೆ.

ರಾಜ್ಯದ ಪ್ರತಿಷ್ಠಿತ ಸಹಕಾರ ಸಂಸ್ಥೆಯಾದ ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2024-25ನೇ ಸಾಲಿನಲ್ಲಿ ರೂ. 2,935 ಕೋಟಿ ವಾರ್ಷಿಕ ವಹಿವಾಟು ನಡೆಸಿ ರೂ. 19.37 ಕೋಟಿ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಹಕಾರ ಕ್ಷೇತ್ರದಲ್ಲಿ 107 ವರ್ಷಗಳಿಂದ ಸಾರ್ಥಕ ಸೇವೆಯನ್ನು ನೀಡುತ್ತಿರುವ ಸಂಘವು 2024-25 ಆರ್ಥಿಕ ವರ್ಷಾಂತ್ಯಕ್ಕೆ ಇದ್ದಂತೆ 21,519 ಸದಸ್ಯರಿಂದ 4.83 ಕೋ.ರೂ ಪಾಲು ಬಂಡವಾಳ ಹೊಂದಿರುತ್ತದೆ.

1,050 ಕೋಟಿ ರೂ. ಸಾರ್ವಕಾಲಿಕ ದಾಖಲೆಯ ವ್ಯವಹಾರ

ವರದಿ ವರ್ಷಾಂತ್ಯಕ್ಕೆ ಸಂಘವು ಒಟ್ಟು ರೂ.573 ಕೋಟಿ ಠೇವಣಿ ಸಂಗ್ರಹಿಸಿದ್ದು, ಕಳೆದ ಸಾಲಿಗಿಂತ ಶೇ.12.45 ಏರಿಕೆ ಕಂಡಿದೆ. ಸದಸ್ಯರಿಗೆ ಗೃಹನಿರ್ಮಾಣ, ವಾಹನ ಖರೀದಿಯ ಬಗ್ಗೆ, ಜಮೀನು ಖರೀದಿ ಮತ್ತು ಅಭಿವೃದ್ಧಿಯ ಬಗ್ಗೆ, ವಾಣಿಜ್ಯ ಸಂಕೀರ್ಣ ಹಾಗೂ ವಸತಿ ಸಮುಚ್ಚಯ ನಿರ್ಮಾಣದ ಬಗ್ಗೆ, ಸ್ವಉದ್ಯೋಗಕ್ಕಾಗಿ, ವಿದ್ಯಾಭ್ಯಾಸ, ಮದುವೆ, ಚಿನ್ನಾಭರಣಗಳ ಈಡಿನ ಮೇಲೆ ಹಾಗೂ ಮನೆವಾರ್ತೆಗಳಿಗೆ ಸೂಕ್ತ ದಾಖಲೆಗಳನ್ನು ಪಡೆದುಕೊಂಡು ಸಾಲವನ್ನು ವಿತರಿಸುತ್ತಿದ್ದು ವರದಿ ವರ್ಷಾಂತ್ಯಕ್ಕೆ 477 ಕೋ.ರೂ ಸದಸ್ಯರ ಹೊರಬಾಕಿ ಸಾಲ ಇದ್ದು, ಕಳೆದ ಸಾಲಿಗಿಂತ ಶೇ.18.62 ಏರಿಕೆ ಕಂಡಿದೆ. 95.18 ಕೋ.ರೂ ನಿಧಿಗಳು, 229.73 ಕೋ.ರೂ ಹೂಡಿಕೆಗಳು ಇದ್ದು, ರೂ.673.20 ಕೋಟಿ ರೂ. ದುಡಿಯುವ ಬಂಡವಾಳವನ್ನು ಹೊಂದಿರುತ್ತದೆ. ಸಂಘವು ತನ್ನ ಕಾರ್ಯಕ್ಷೇತ್ರದಲ್ಲಿ 11 ಶಾಖೆಗಳನ್ನು ಹೊಂದಿದ್ದು ಈ ಪೈಕಿ 8 ಶಾಖೆಗಳು ಸಂಘದ ಸ್ವಂತ ನಿವೇಶನದಲ್ಲಿರುತ್ತದೆ. 12ನೇ ಶಾಖೆಯಾಗಿ ಕುಂದಾಪುರದ ಹೃದಯಭಾಗದಲ್ಲಿ ಸ್ವಂತ ಕಛೇರಿಯನ್ನು ಈಗಾಗಲೇ ಖರೀದಿಸಲಾಗಿದ್ದು, ಸದ್ಯದಲ್ಲೇ ಗ್ರಾಹಕರ ಸೇವೆಗೆ ಲಭ್ಯವಾಗಲಿದೆ.
ಸತತವಾಗಿ 2 ಬಾರಿ ರಾಷ್ಟç ಪ್ರಶಸ್ತಿ, 9 ಬಾರಿ ರಾಜ್ಯ ಮಟ್ಟದ ಪ್ರಶಸ್ತಿ, 18 ಬಾರಿ ಅವಿಭಜಿತ ದ.ಕ ಜಿಲ್ಲಾ ಪ್ರಶಸ್ತಿಗಳನ್ನು ಪಡೆದು ಯಶಸ್ವೀ ಕ್ರೆಡಿಟ್ ಸೊಸೈಟಿ ಯಾಗಿ ಸಂಘವು ಗುರುತಿಸಿಕೊಂಡಿದೆ. ಕೇವಲ ವ್ಯವಹಾರ ಮಾಡಿ ಲಾಭ ಗಳಿಸುವ ದೃಷ್ಟಿಯನ್ನು ಮಾತ್ರ ಇಟ್ಟುಕೊಳ್ಳದೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಂಡು ವಾರ್ಷಿಕ ಸುಮಾರು ರೂ. 20 ಲಕ್ಷದಷ್ಟು ಶಿಕ್ಷಣದ ಬಗ್ಗೆ, ಆರೋಗ್ಯದ ಬಗ್ಗೆ, ಸಾಮಾಜಿಕ ಕಾರ್ಯಕ್ರಮಗಳಿಗೆ ತೊಡಗಿಸುತ್ತಾ ಬಂದಿರುತ್ತದೆ.

ಚೇತನಾ ಮೊಬೈಲ್ ಆ್ಯಪ್

ಡಿಜಿಟಲೀಕರಣದ ಹೆಜ್ಜೆಯಾಗಿ ಅಭಿವೃದ್ಧಿಪಡಿಸಿದ “ಚೇತನಾ ಮೊಬೈಲ್ ಆ್ಯಪ್” ಮೂಲಕ ಗ್ರಾಹಕರು ತಾವಿರುವಲ್ಲಿಯೇ ತಮ್ಮ ಖಾತೆಯಿಂದ IMPS/NEFT/RTGS ಮೂಲಕ ಮೊಬಲಗು ವರ್ಗಾವಣೆ, RD ಹಾಗೂ ಸಾಲ ಖಾತೆಗಳಿಗೆ ಮೊಬಲಗು ವರ್ಗಾಯಿಸುವುದು, ಸಂಘದ ನೂತನ ಯೋಜನೆಯ ಕುರಿತಾದ ಮಾಹಿತಿಗಳನ್ನೂ ಪಡೆಯಬಹುದಾಗಿದ್ದು, ಸದ್ರಿ ಆ್ಯಪ್ ಬಗ್ಗೆ ಬಳಕೆದಾರರಿಂದ ಉತ್ತಮ ಸ್ಪಂದನೆ ದೊರೆತಿರುತ್ತದೆ. ಗೂಗಲ್ ಪ್ಲೇ-ಸ್ಟೋರ್, ಆ್ಯಪಲ್ ಆ್ಯಪ್ ಸ್ಟೋರ್‌ನಲ್ಲಿ ಲಭ್ಯವಿರುವ ಈ ಆ್ಯಪ್‌ನ ಪ್ರಯೋಜನ ಪಡೆಯುವ ಬಗ್ಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ಶಾಖೆಗೆ ತೆರಳಿ ಮಾಹಿತಿ ಪಡೆಯುವಂತೆ ತಿಳಿಸಿದರು.
ಆಧುನಿಕತೆಗೆ ಸಾಕ್ಷಿಯಾಗಿ ದೈನಿಕ ಠೇವಣಿ ಸಂಗ್ರಹಣೆಯನ್ನು ಮೊಬೈಲ್ ಆ್ಯಪ್ (ಪಿಗ್ಮಿ ಮೊಬೈಲ್ ಆ್ಯಪ್) ಮೂಲಕ ನಡೆಸಲಾಗುತ್ತಿದೆ. ಸಂಘದ ಎಲ್ಲಾ ಶಾಖೆಗಳಲ್ಲಿ ಗ್ರಾಹಕರಿಗೆ ವಿವಿಧ ರೀತಿಯ ಸೇವೆ ನೀಡುವ ಸಲುವಾಗಿ ಈಗಾಗಲೇ ಸೇಫ್ ಲಾಕರ್ ಸೌಲಭ್ಯ, ಇ-ಸ್ಟಾಂಪಿAಗ್, ಪಾನ್ ಕಾರ್ಡ್, ಓಇಈಖಿ/ಖಖಿಉS ಸೇವಾ ಸೌಲಭ್ಯ, ಮನಿ ಟ್ರಾನ್ಸ್ಫರ್ ಸೌಲಭ್ಯ, ಲಂಬಾರ್ಡ್ ಆರೋಗ್ಯ ಕಾರ್ಡ್, ಮಣಿಪಾಲ ಆರೋಗ್ಯ ಕಾರ್ಡ್, ಆರೋಗ್ಯ ವಿಮೆ, ಸಾಮಾನ್ಯ ವಿಮೆ, “0” ಬ್ಯಾಲೆನ್ಸ್ ವಿದ್ಯಾನಿಧಿ ಖಾತೆ, ಮಿಸ್ಡ್ಕಾಲ್ ಸರ್ವಿಸ್, ಉಚಿತ ಎಸ್.ಎಂ.ಎಸ್ ಸೌಲಭ್ಯ ನೀಡುತ್ತಿದ್ದು, ಸಂಘದ ಎಲ್ಲಾ ಮಾಹಿತಿ, ಅಪ್‌ಡೇಟ್ಸ್ಗಳಿಗೆ www.badagabettusociety.com/kannada ಜಾಲತಾಣ ಭೇಟಿ ನೀಡಬಹುದು ಎಂದು ತಿಳಿಸಿದರು.

ಮುಂದಿನ ಗುರಿ - 1,500 ಕೋಟಿ ರೂ.

ಮುಂದಿನ ವರದಿ ವರ್ಷದಲ್ಲಿ ರೂ. 800 ಕೋಟಿ ಠೇವಣಿ, ರೂ.700 ಕೋಟಿ ಹೊರಬಾಕಿ ಸಾಲ ಅಂದರೆ ಒಟ್ಟು 1,500 ಕೋಟಿ ರೂ. ವ್ಯವಹಾರ ನಡೆಸುವ ಗುರಿ ಹೊಂದಿದ್ದು, ಉಡುಪಿಯ ಹೃದಯ ಭಾಗದಲ್ಲಿ ಈಗಾಗಲೇ ಖರೀದಿಸಿರುವ 1 ಎಕ್ರೆ ಆಸ್ತಿಯಲ್ಲಿ ಅಂದಾಜು ರೂ.10.00 ಕೋಟಿ ವೆಚ್ಚದಲ್ಲಿ “ಸಹಕಾರ ಸೌಧ” ನಿರ್ಮಾಣದ ಯೋಜನೆಯನ್ನು ಹಾಕಿಕೊಂಡಿದೆ.
ಪ್ರತಿಯೊಂದು ಶಾಖೆಗಳಲ್ಲಿ ಶಾಖಾ ಸಲಹಾ ಸಮಿತಿಗಳನ್ನು ರಚನೆ ಮಾಡಿದ್ದು, ಆಯಾ ಸಮಿತಿ ಸದಸ್ಯರ ಮೇಲ್ವಿಚಾರಣೆಯಲ್ಲಿ ಪ್ರತಿಯೊಂದು ಶಾಖೆಗಳಲ್ಲಿ ಹೊಸ ಹೊಸ ಯೋಜನೆಗಳನ್ನು ಕಾರ್ಯಗತಗೊಳಿಸುವ ಚಿಂತನೆಯನ್ನು ಹಾಕಿಕೊಂಡಿರುತ್ತೇವೆ ಎಂದು ತಿಳಿಸಿದರು.
ಉಪಾಧ್ಯಕ್ಷರಾದ ಜಾರ್ಜ್ ಸಾಮ್ಯುಯೆಲ್, ಆಡಳಿತ ಮಂಡಲಿಯ ಸದಸ್ಯರಾದ ಸಂಜೀವ ಕಾಂಚನ್, ಪುರುಷೋತ್ತಮ ಪಿ. ಶೆಟ್ಟಿ, ಉಮಾನಾಥ ಎಲ್, ವಿನಯ ಕುಮಾರ್ ಟಿ.ಎ, ಪದ್ಮನಾಭ ನಾಯಕ್, ಸೈಯದ್ ಅಬ್ದುಲ್ ರಜಾಕ್, ಸದಾಶಿವ ನಾಯ್ಕ್, ಮನೋಹರ ಎಸ್. ಶೆಟ್ಟಿ, ಸಾಧು ಸಾಲ್ಯಾನ್, ಜಯಾ ಶೆಟ್ಟಿ, ಗಾಯತ್ರಿ ಎಸ್. ಭಟ್, ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

ವಿಶ್ವ ಆರೋಗ್ಯ ದಿನಾಚರಣೆ-2025 (ಉಚಿತ ಆರೋಗ್ಯ ತಪಾಸಣಾ ಶಿಬಿರ)

ಪ್ರತಿಯೊಬ್ಬ ಜನಸಾಮಾನ್ಯರು ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿ ಹೊಂದುವುದರೊAದಿಗೆ ಸದೃಢವಾದ ‘ಆರೋಗ್ಯ ಕಾಪಾಡಿಕೊಂಡು ಸ್ವಾಸ್ಥ್ಯ ಜೀವನ ನಡೆಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ ಹೇಳಿದರು. ಅವರು ಸೋಮವಾರ ನಗರದ ಮೀಡಿಯಂ ಸ್ಕೂಲ್ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ ಘಟಕ, ಜಿಲ್ಲಾ ಆಸ್ಪತ್ರೆ ಎನ್ .ಸಿ.ಡಿ ವಿಭಾಗ, ಕ್ರಿಶ್ಚಿಯನ್ ಇಂಗ್ಲೀಷ್ ಮೀಡಿಯಂ ಸ್ಕೂಲ್, ಮಿಷನ್ ಆಸ್ಪತ್ರೆ ರೋಡ್ ಉಡುಪಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ, ಪೊಲೀಸ್ ಉಪಾಧೀಕ್ಷಕರ ಕಚೇರಿ ಉಪವಿಭಾಗ ಹಾಗೂ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಇವರ ಸಹಯೋಗದಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಜಿಲ್ಲಾ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ್, ಜಿಲ್ಲಾ ಎನ್ ಸಿಡಿ ಕೋ-ಆರ್ಡಿನೇಟರ್ ಡಾ. ಅಂಜಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಸರ್ಜನ್ ಡಾ. ಅಶೋಕ್ ಅಧ್ಯಕ್ಷತೆ ವಹಿಸಿದ್ದರು. ನ್ಯೂಸಿಟಿ ಕಾಲೇಜ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳಿಂದ ಆರೋಗ್ಯ ಕಾಳಜಿ ಕುರಿತು ಕಿರುನಾಟಕ ಪ್ರದರ್ಶಿಸಲಾಯಿತು. ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಅಧ್ಯಕ್ಷ ಡಾ. ಸುರೇಶ್ ಶೆಣೈ, ಮಂಗಳೂರು ಎ.ಜೆ ಆಸ್ಪತ್ರೆಯ ರೇಡಿಯೇಷನ್ ಅಂಕೊಲಾಜಿ ವಿಭಾಗ ಮುಖ್ಯಸ್ಥಡಾ. ಕಮಲಾಕ್ಷ ಶೆಣೈ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಿಇಒ ರಾಜೇಶ್ ಶೇರಿಗಾರ್, ಕ್ರಿಶ್ಚಿಯನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮುಖ್ಯೋಪಾಧ್ಯಾಯಿನಿ ಹೆಲೆನ್, ಪಿ.ಎಸ್.ಐ ಈರಣ್ಣ, ಜಿಲ್ಲಾ ಆಸ್ಪತ್ರೆಯ ಆಪ್ತ ಸಮಾಲೋಚಕ ಮನು ಎಸ್.ಬಿ. ನ್ಯೂಸಿಟಿ ಕಾಲೇಜ್ ಆಫ್ ನರ್ಸಿಂಗ್ ಇಲ್ಲಿನ ಅಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಸರ್ಜನ್ ಡಾ. ಅಶೋಕ್ ಅಧ್ಯಕ್ಷತೆ ವಹಿಸಿದ್ದರು. ನ್ಯೂಸಿಟಿ ಕಾಲೇಜ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳಿಂದ ಆರೋಗ್ಯ ಕಾಳಜಿ ಕುರಿತು ಕಿರುನಾಟಕ ಪ್ರದರ್ಶಿಸಲಾಯಿತು. ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಅಧ್ಯಕ್ಷ ಡಾ. ಸುರೇಶ್ ಶೆಣೈ, ಮಂಗಳೂರು ಎ.ಜೆ ಆಸ್ಪತ್ರೆಯ ರೇಡಿಯೇಷನ್ ಅಂಕೊಲಾಜಿ ವಿಭಾಗ ಮುಖ್ಯಸ್ಥಡಾ. ಕಮಲಾಕ್ಷ ಶೆಣೈ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಿಇಒ ರಾಜೇಶ್ ಶೇರಿಗಾರ್, ಕ್ರಿಶ್ಚಿಯನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮುಖ್ಯೋಪಾಧ್ಯಾಯಿನಿ ಹೆಲೆನ್, ಪಿ.ಎಸ್.ಐ ಈರಣ್ಣ, ಜಿಲ್ಲಾ ಆಸ್ಪತ್ರೆಯ ಆಪ್ತ ಸಮಾಲೋಚಕ ಮನು ಎಸ್.ಬಿ. ನ್ಯೂಸಿಟಿ ಕಾಲೇಜ್ ಆಫ್ ನರ್ಸಿಂಗ್ ಇಲ್ಲಿನ ಅಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಸ್ವಾಗತಿಸಿ, ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ನಿರೂಪಿಸಿದರೆ, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ವಂದಿಸಿದರು. ಈ ಶಿಬಿರದಲ್ಲಿ ಮಧುಮೇಹ ರಕ್ತಪರೀಕ್ಷೆ, ರಕ್ತದೊತ್ತಡ ಪರೀಕ್ಷೆ, ಹೃದ್ರೋಗ ತಪಾಸಣೆ (ECG ಪರೀಕ್ಷೆ) ಗರ್ಭಕಂಠ ಕ್ಯಾನ್ಸರ್ ತಪಾಸಣೆ, ಸ್ಥನ ಕ್ಯಾನ್ಸರ್ ತಪಾಸಣೆ, ಬಾಯಿ ಕ್ಯಾನ್ಸರ್ ಮತ್ತು ದಂತ ತಪಾಸಣೆ, ಕಣ್ಣಿನ ಪರೀಕ್ಷೆ, HB ಪರೀಕ್ಷೆ ಹಾಗೂ ಜೀವನ ಶೈಲಿ ಮಾರ್ಪಾಡು ಕುರಿತು ಆಪ್ತಸಮಾಲೋಚನೆ, ತಂಬಾಕು ದುಷ್ಪರಿಣಾಮಗಳ ಬಗ್ಗೆ ಆಪ್ತ ಸಮಾಲೋಚನೆ, ಪಿಜಿಯೋಥೆರಪಿ ಸೌಲಭ್ಯಗಳನ್ನು ನೀಡಲಾಯಿತು ಹಾಗೂ ಆರೋಗ್ಯ ದಿನಾಚರಣೆಯ ಮಹತ್ವದ ಕುರಿತು “ಆರೋಗ್ಯವೇ ಭಾಗ್ಯ” ಎಂಬ ಕಿರುನಾಟಕದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು ಹಾಗೂ ಆರೋಗ್ಯದ ಕುರಿತು ವ್ಯಾಯಾಮ, ಜೀವನಶೈಲಿ ಮಾರ್ಪಾಡು ಮತ್ತು ಮುನ್ನೆಚ್ಚರಿಕೆ ಕ್ರಮಗಳು ಬಗ್ಗೆ ಹಾಡಿನ ಮೂಲಕ ಅರಿವು ಮೂಡಿಸಲಾಯಿತು.

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ: ಮಾರ್ಪಳ್ಳಿ ಶಂಕರ್ ಶೇರಿಗಾರ್ ಸನ್ಮಾನ

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿರುವ ಮಾರ್ಪಳ್ಳಿ ಶಂಕರ್ ಶೇರಿಗಾರ್ ಅವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಆರಂಭದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಂಡ ಶಂಕರ ಶೇರಿಗಾರ್ ಕ್ರಮೇಣ ಕಿರಿಯ ಗುಮಾಸ್ತ, ಹಿರಿಯ ಗುಮಾಸ್ತ ಹುದ್ದೆಯನ್ನು ಅಲಂಕರಿಸಿದ್ದರು. ಬಳಿಕ ವಿವಿಧ ಶಾಖೆಗಳಲ್ಲಿ ಶಾಖಾ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ್ದ ಇವರು ಸಾಲ ವಸೂಲಾತಿ ವಿಭಾಗದಲ್ಲಿ ಹಾಗೂ ಮಾರಾಟಾಧಿಕಾರಿಯಾಗಿಯೂ ಬಹಳ ನಿಷ್ಠೆಯಿಂದ ದುಡಿದಿದ್ದಾರೆ. ಇದೀಗ ಶಾಖಾ ವ್ಯವಸ್ಥಾಪಕರಾಗಿ ವಯೋನಿವೃತ್ತಿ ಹೊಂದಿರುವ ಶಂಕರ ಶೇರಿಗಾರ್ ಅವರಿಗೆ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಅವರ ಮುಂದಿನ ಜೀವನ ಶ್ರೇಯಸ್ಸಿನಿಂದ ತುಂಬಿರಲಿ ಎಂದು ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಉಪಾಧ್ಯಕ್ಷರಾದ ಜಾರ್ಜ್ ಸಾಮ್ಯುವೆಲ್, ಪ್ರಧಾನ ವ್ಯವಸ್ಥಾಪಕಾರದ ರಾಜೇಶ್ ವಿ. ಶೇರಿಗಾರ್, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ.

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ

ಪರ್ಯಾಯ ಶ್ರೀಕೃಷ್ಣಮಠದ ಆಶ್ರಯದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್, ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಇವರ ಸಹಭಾಗಿತ್ವದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಹಾಗು ಮಹಿಳಾ ವೈದ್ಯರ ಘಟಕ, ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಹಾಗೂ ಎ.ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಇಲ್ಲಿನ ತಜ್ಞ ವೈದ್ಯರುಗಳ ಸಮ್ಮಿಲನದಲ್ಲಿ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರವು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿತು. ಶಿಬಿರವನ್ನು ಪರಮಪೂಜ್ಯ ಪರ್ಯಾಯ ಶ್ರೀಪಾದರಾದ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. “ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕಾಂಶ ಆಹಾರದ ಅಗತ್ಯತೆ” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು. ಎಲ್ಲಾ ತರಹದ ಆರೋಗ್ಯ, ದಂತ, ಕಣ್ಣಿನ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ಗರ್ಭಕಂಠದ ಸ್ತಿçÃಯರ ಪರೀಕ್ಷೆ, ಎಲುಬಿನ ಸಾಂದ್ರತೆ ಪರೀಕ್ಷೆಗಳನ್ನು ತಜ್ಞ ವೈದ್ಯರಿಂದ ನಡೆಸಲಾಯಿತು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಬಡಗಬೆಟ್ಟು ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ ಶೇರಿಗಾರ್, ಎ.ಜಿ.ಎಂ ಪ್ರವೀಣ್ ಕುಮಾರ್, ರತ್ನಾಕರ್ ಇಂದ್ರಾಳಿ ಇತರ ಪ್ರಮುಖರು ಉಪಸ್ಥಿತರಿದ್ದರು.

ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಕಾಪು ನವದುರ್ಗಾ ಲೇಖನ ಯಜ್ಞ ಸಂಕಲ್ಪ ಕಾರ್ಯಕ್ರಮ

ಗೃಹ ನಿರ್ಮಾಣ ಸಹಕಾರ ಸಂಘದ ಸಹಭಾಗಿತ್ವದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಕಾರ್ಯಕ್ರಮವಾದ ನವದುರ್ಗಾ ಲೇಖನಯಜ್ಞದ ಸಂಕಲ್ಪ ಕಾರ್ಯಕ್ರಮವು ಬಡಗಬೆಟ್ಟು ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ 18-01-2025 ರಂದು ಜರಗಿತು.
ವಿವಿಧ ಸಹಕಾರ ಸಂಸ್ಥೆಗಳ 9 ಸ್ತ್ರೀಯರು ನವದೀಪವನ್ನು ಪ್ರಜ್ವಲಿಸಿ ದೇವಿಗೆ ಆರತಿ ಬೆಳಗಿಸಿದರು. ಬಡಗಬೆಟ್ಟು ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಮನೋಹರ್ ಎಸ್. ಶೆಟ್ಟಿಯವರು ಪವಾಡ ಸದೃಶ ರೀತಿಯಲ್ಲಿ ಬೆಳಗುತ್ತಿರುವ ಕಾಪು ಮಾರಿಯಮ್ಮನ ಸಾನಿಧ್ಯದ ಕುರಿತು ವಿವರಿಸಿದರು.
ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷರಾದ ಕೆ. ರಘುಪತಿ ಭಟ್‌ರವರು ಲೇಖನ ಯಜ್ಞದ ಕೈಗೊಳ್ಳುವ ವಿಧಾನ ಹಾಗೂ ಅದರ ಫಲದ ಬಗ್ಗೆ ತಿಳಿಸಿದರು. ನವದುರ್ಗಾ ಲೇಖನ ಯಜ್ಞ ಸಮಿತಿ ಮಹಿಳಾ ಮುಖ್ಯ ಸಂಚಾಲಕರಾದ ಗೀತಾಂಜಲಿ ಸುವರ್ಣ, ಉಡುಪಿ ಇಂಡಸ್ಟ್ರೀಯಲ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಹೆಗ್ಡೆ, ಗುರುನಿತ್ಯಾನಂದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಶೆಟ್ಟಿ ಹಾಗೂ ಉಡುಪಿ ಗೃಹ ನಿರ್ಮಾಣ ಸಹಕಾರ ಸಂಘದ ಪ್ರಧಾನ ವ್ಯವಸ್ಥಾಪಕಾರದ ಅಶೋಕ್ ಭಟ್, ಈ ಎಲ್ಲಾ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬಡಗಬೆಟ್ಟು ಸೊಸೈಟಿಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ ವಂದಿಸಿದರು.

ಆಧಾರ್ ತಿದ್ದುಪಡಿ ಹಾಗೂ ಹೊಸ ನೋಂದಣಿ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ನೇತೃತ್ವದಲ್ಲಿ ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ ಶಾಲೆ, ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಅಂಚೆ ಜನಸಂಪರ್ಕ ಅಭಿಯಾನ ಅಡಿಯಲ್ಲಿ ಆಧಾರ್ ತಿದ್ದುಪಡಿ ಮತ್ತು ಹೊಸ ನೋಂದಣಿ ಶಿಬಿರ ಹಾಗೂ ಸಿ.ಎಸ್.ಐ ಲಂಬಾರ್ಡ್ ಮೆಮೋರಿಯಲ್ (ಮಿಷನ್ ಆಸ್ಪತ್ರೆ) ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ ಶಾಲಾ ವಠಾರದಲ್ಲಿ ಜರಗಿತು. ಉಡುಪಿ ವಿಭಾಗದ ಅಂಚೆ ಅಧೀಕ್ಷಕರಾದ ರಮೇಶ್ ಪ್ರಭುರವರು ಅತಿಥಿಗಳೊಡಗೂಡಿ ಕಾರ್ಯಕ್ರಮ ಉದ್ಘಾಟಿಸಿದರು. ಉಡುಪಿ ದಕ್ಷಿಣ ಉಪ ವಿಭಾಗದ ಸಹಾಯಕ ಅಂಚೆ ಅಧೀಕ್ಷಕರಾದ ಕೃಷ್ಣರಾಜ ವಿಠ್ಠಲ ಭಟ್ ಪ್ರಸ್ತಾವನೆಗೈದರು. ಉದ್ಘಾಟನಾ ಸಮಾರಂಭವು ಬಡಗಬೆಟ್ಟು ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ಉಡುಪಿ ನಗರಸಭೆಯ ಸದಸ್ಯರಾದ ರಮೇಶ್ ಕಾಂಚನ್, ಮಿಷನ್ ಆಸ್ಪತ್ರೆಯ ಸೀನಿಯರ್ ಮೆಡಿಕಲ್ ಆಫೀಸರ್ ಡಾ. ಗಣೇಶ್ ಕಾಮತ್, ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಹೆಲೆನ್ ವಿ ಸಾಲಿನ್ಸ್, ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ವೇತಾ ಶ್ರೀನಿವಾಸ್ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಜಾರ್ಜ್ ಸಾಮ್ಯುವೆಲ್ ಉಪಸ್ಥಿತರಿದ್ದರು. 200ಕ್ಕೂ ಅಧಿಕ ಮಂದಿ ಆಧಾರ್ ತಿದ್ದುಪಡಿ ಹಾಗೂ ಹೊಸ ನೋಂದಣಿ ಅಭಿಯಾನದ ಪ್ರಯೋಜನ ಪಡಕೊಂಡರು. ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 150 ಕ್ಕೂ ಅಧಿಕ ಮಂದಿ ಭಾಗಿಯಾದರು. ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ ಸ್ವಾಗತಿಸಿ, ಮಲ್ಪೆ ಶಾಖಾ ವ್ಯವಸ್ಥಾಪಕರಾದ ನವೀನ್ ಕೆ ಕಾರ್ಯಕ್ರಮ ನಿರೂಪಿಸಿದರು. ಸೊಸೈಟಿಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ವಂದಿಸಿದರು.

ಇಂದ್ರಾಳಿ ಆರೋಗ್ಯ ತಪಾಸಣಾ ಶಿಬಿರ

ನಮ್ಮ ಸಂಘ, ಪ್ರಗತಿ ಯುವಕ ಸಂಘ ಇಂದ್ರಾಳಿ ಹಾಗೂ ಇತರ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಇಂದ್ರಾಳಿ ಇಂಗ್ಲಿಷ್ ಮೀಡಿಯಂ ಸ್ಕೂಲಲ್ಲಿ ಜರಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಡಗಬೆಟ್ಟು ಸೊಸೈಟಿಗೆ 9ನೇ ಬಾರಿಗೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

ಮಂಗಳೂರಿನಲ್ಲಿ ಜರಗಿದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಸಾಧನೆಗಾಗಿ 9ನೇ ಬಾರಿಗೆ ರಾಜ್ಯ ಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಯನ್ನು ಪಡೆದಿರುತ್ತದೆ. ಸಂಘದ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿಯವರು ಗಣ್ಯರ ಸಮಕ್ಷಮ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಸಚಿವರಾದ ಶ್ರೀ ಕೆ.ಎನ್ ರಾಜಣ್ಣ, ರಾಜ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಶ್ರೀ ಜಿ ಟಿ ದೇವೇಗೌಡ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್, ಶಾಸಕರಾದ ವೈ ಭರತ್ ಶೆಟ್ಟಿ, ಯಶ್ಪಾಲ್ ಸುವರ್ಣ, ದ.ಕ ಜಿಲ್ಲಾ ಸಹಕಾರ ಯೂನಿನನ್ನ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಕೆ.ಎಂ.ಎಫ್ ಅಧ್ಯಕ್ಷರಾದ ಶ್ರೀ ಕೆ.ಪಿ ಸುಚರಿತ ಶೆಟ್ಟಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಮಂಡಳಿ ಸದಸ್ಯರು ಹಾಗೂ ಇತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಪ್ತಾಹ ಧ್ವಜಾರೋಹಣ

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ 71 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಸಂಘದ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರು ಧ್ವಜಾರೋಹಣ ನೆರವೇರಿಸಿದರು. ಎಂ.ಜಿ.ಎಂ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ಸಂಘದ ಆಡಳಿತ ಮಂಡಳಿ ಸದಸ್ಯರು. ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ ಸ್ವಾಗತಿಸಿ, ಶಾಖಾ ವ್ಯವಸ್ಥಾಪಕರಾದ ನವೀನ್ ಕೆ. ವಂದಿಸಿದರು. ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.