Badagabettu Society

ಸುಮಾರು 12.00 ಲಕ್ಷ ರೂ. ಮೌಲ್ಯದ ನೋಟ್ ಪುಸ್ತಕ, ಶೈಕ್ಷಣಿಕ ಪರಿಕಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ

ಸಹಕಾರ ಕ್ಷೇತ್ರದಲ್ಲಿ ಸಾಧನೆಗೆ ಹೆಸರಾಗಿ, ಸತತ ಸಾಧನೆಯನ್ನು ಮಾಡುತ್ತಲೇ ಸಮಾಜದ ಎಲ್ಲಾ ವರ್ಗಗಳ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಾ ವಿವಿಧ ಸಾಮಾಜಿಕ, ಆರ್ಥಿಕ ಸೇವೆಗಳನ್ನು ನಿಸ್ವಾರ್ಥ ಮನೋಭಾವನೆಯೊಂದಿಗೆ, ಜವಾಬ್ದಾರಿಯುತ ಕಾರ್ಯವೈಖರಿಯೊಂದಿಗೆ ನಿರ್ವಹಿಸಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಶತಮಾನೋತ್ಸವವನ್ನು ಯಶಸ್ವಿಯಾಗಿ ಪೂರೈಸಿ ಮುನ್ನಡೆಯುತ್ತಿರುವ ಉಡುಪಿಯ ಪ್ರತಿಷ್ಠಿತ ಸಹಕಾರ ಸಂಘ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸಾÊಟಿ ಲಿಮಿಟೆಡ್.
ಪುಸ್ತಕದಲ್ಲಿರುವ ಪಠ್ಯವನ್ನು ಓದಿ ಅಂಕ ಗಳಿಸುವುದು ಅನಿವಾರ್ಯವಾದರೂ ಅದರೊಂದಿಗೆ ಜೀವನದಲ್ಲಿ ಉನ್ನತ ಸ್ಥಾನಮಾನ ಗಿಟ್ಟಿಸಿಕೊಳ್ಳಲು ನಿರಂತರ ಕಲಿಕೆ ಅತ್ಯಗತ್ಯ. ಆಧುನಿಕ ಯುಗದಲ್ಲಿ ವಿದ್ಯಾಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಮನೋಭಾವ ಬೆಳೆಸಿಕೊಂಡು ಸುದ್ದಿ ಪತ್ರಿಕೆ, ಸಾಹಿತ್ಯಾದಿ ಪುಸ್ತಕಗಳನ್ನು ಓದಿದಾಗ ಜೀವನಕ್ಕೆ ಬೇಕಾದ ಮೌಲ್ಯ, ಸಾಮರ್ಥ್ಯವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಉಡುಪಿ ಎಎಸ್ಪಿ ಎಸ್.ಟಿ ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು. ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ಉಡುಪಿ ಅಜ್ಜರಕಾಡು ಟೌನ್ ಹಾಲ್ನಲ್ಲಿ ದಿನಾಂಕ 22-06-2024 ಶನಿವಾರ ನಡೆದ ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ 12 ಲ.ರೂ. ಮೌಲ್ಯಕ್ಕೂ ಮಿಕ್ಕಿದ ನೋಟ್ ಪುಸ್ತ, ಶೈಕ್ಷಣಿಕ ಪರಿಕರ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಇರಿಸಿಕೊಂಡು ಆ ನಿಟ್ಟಿನಲ್ಲಿ ಶ್ರಮಿಸಿದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕರಾದ ಕೆ. ಗಣಪತಿಯವರು ಹೇಳಿದರು.

ಫಲಾನುಭವಿಗಳಿಗೆ ಉಚಿತ ನೋಟ್ ಪುಸ್ತಕ , ಆರೋಗ್ಯ ಕಾರ್ಡ್ ಹಾಗೂ ಬೈಸಿಕಲ್ ವಿತರಣಾ ಸಮಾರಂಭ

ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಜರಗಿದ ಸಮಾರಂಭದಲ್ಲಿ ಸುಮಾರು ರೂ. 15 ಲಕ್ಷ ಮೌಲ್ಯದ 50 ಸಾವಿರಕ್ಕಿಂತಲೂ ಅಧಿಕ ನೋಟ್ ಪುಸ್ತಕವನ್ನು ಜಿಲ್ಲೆಯ 100 ಕನ್ನಡ ಮಾಧ್ಯಮ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಯಿತು. ಲಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆ ಇವರೊಂದಿಗೆ ಒಡಂಬಡಿಕೆ ಮಾಡಿಕೊಂಡು ಸಂಘದ ಸದಸ್ಯರಿಗೆ, ಗ್ರಾಹಕರಿಗೆ ಅನುಕೂಲವಾಗುವಂತೆ “ಲಂಬಾರ್ಡ್ ಆರೋಗ್ಯ ಕಾರ್ಡ್”ನ್ನು 1900 ಸದಸ್ಯರಿಗೆ ವಿತರಿಸಲಾಯಿತು. ಡಾ| ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಉಡುಪಿ ಇದರ ಸಭಾಂಗಣಕ್ಕೆ ಸಂಘದ ವತಿಯಿಂದ 200 ಆಸನಗಳನ್ನು, ಡಾ.ಬಿ.ಆರ್ ಅಂಬೇಡ್ಕರ್ ಯುವಕ ಮಂಡಲ, ಚೆಂಡ್ಕಳ, ಕೊಡವೂರು ಇವರಿಗೆ ಸಂಘದ ವತಿಯಿಂದ 50 ಆಸನಗ¼ನ್ನು ವಿತರಿಸಲಾಯಿತು. ಅಲ್ಲದೆ ಸಂಘದ ವತಿಯಿಂದ ಆರ್ಥಿಕ ಸಹಾಯ ವಿತರಣಾ ಕಾರ್ಯಕ್ರಮ ನೆರವೆರಿತು. ಗೋ-ಗ್ರೀನ್ ಅಭಿಯಾನದಡಿ ಇಂಧನ ಉಳಿತಾಯ ಹಾಗೂ ಪರಿಸರ ಮಾಲಿನ್ಯ ತಡೆಗೆ ಒತ್ತು ನೀಡುವ ಉದ್ದೇಶದಿಂದ ಸಂಘದ ಸಿಬ್ಬಂದಿಗಳಿಗೆ ಸೈಕಲ್ ವಿತರಿಸುವ ಕಾರ್ಯಕ್ರಮವು ಕೂಡಾ ಜರಗಿತು.

ವಿಶ್ವ ಯೋಗ ದಿನಾಚರಣೆ

ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ 4ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವು ಸಂಸ್ಠೆಯ ಸಭಾ ಭವನದಲ್ಲಿ ಸಂಘದ ಸಿಬ್ಬಂದಿಗಳು ಹಾಗೂ ನಿರ್ದೇಶಕ ಮಂಡಳಿ ಸದಸ್ಯರೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮವನ್ನು ಸಂಘದ ಶತಮಾನೋತ್ಸವ ಸಮಿತಿ ಸದಸ್ಯರಾದ ಮಹಮ್ಮದ್ ಮೌಲಾ ಉದ್ಘಾಟಿಸಿದರು. ಯೋಗ ತರಬೇತುದಾರರಾಗಿ ಸತೀಶ್ ಕುಮಾರ್ ಮಲ್ಪೆ, ರಾಘವೇಂದ್ರ , ಹಾಗೂ ಸಂಘದ ನಿರ್ದೆಶಕ ಮಂಡಳಿ ಸದಸ್ಯರುಗಳಾದ ಜಯಶೆಟ್ಟಿ, ಜಯಾನಂದ ಮೈಂದನ್ , ಪದ್ಮನಾಭ ನಾಯಕ್ , ಹಾಗೂ ಪ್ರಧಾನ ವ್ಯವಸ್ಥಾಪಕರಾದ ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಉಚಿತ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ

ಕಾರ್ಯಕ್ರಮದಲ್ಲಿ ರೂ. 3.00 ಲಕ್ಷ ಮೌಲ್ಯದ 10 ಸಾವಿರಕ್ಕಿಂತಲೂ ಅಧಿಕ ನೋಟ್ ಪುಸ್ತಕವನ್ನು ಜಿಲ್ಲೆಯ ಹಲವು ಕನ್ನಡ ಮಾಧ್ಯಮ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಯಿತು. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ನೆರವು ಹಾಗೂ ಕನ್ನಡ ಮಾಧ್ಯಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನೂ ವಿತರಿಸಲಾಯಿತು.

ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಗೆ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕಾಗಿ ಸಂಘದ ವತಿಯಿಂದ ದೇಣಿಗೆಯನ್ನು ನೀಡಲಾಗಿದೆ.

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಶತಮಾನೋತ್ಸವ ಸಂಭ್ರಮಾಚರಣೆಯ ವತಿಯಿಂದ ಪರಿಸರದ ಬಗ್ಗೆ ವಿಶೇಷ ಕಾಳಜಿ ಹೊಂದಿ ಪ್ಲಾಸ್ಟಿಕ್ ಮುಕ್ತ ಅಲೆವೂರು ಗ್ರಾಮ ಎಂಬ ಪರಿಸರ ಸ್ನೇಹಿ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರ ಪ್ರಶಂಶೆಗೆ ಪಾತ್ರವಾದ ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಗೆ ಸಾರ್ವಜನಿಕ ಶೌಚಾಲಯ ನಿರ್ಮಿಸಲು ರೂ. 1 ಲಕ್ಷ ದೇಣಿಗೆಯನ್ನು ಸಂಸ್ಥೆಯ ವತಿಯಿಂದ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕುಂದಾಪುರ ಉಪ-ವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಚಂದ್ರಪ್ರತಿಮ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ,ಶತಮಾನೋತ್ಸವ ಸಮಿತಿ ಸಂಚಾಲಕರಾದ ಪುರುಷೋತ್ತಮ ಪಿ. ಶೆಟ್ಟಿ, ಸಂಘದ ಅಧ್ಯಕ್ಷರಾದ ಸಂಜೀವ ಕಾಂಚನ್, ಉಪಾಧ್ಯಕ್ಷ ಎಲ್. ಉಮಾನಾಥ್, ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಲೇಶ್ ಶೆಟ್ಟಿ, ದೇವೇಂದ್ರ ನಾಯಕ್ ಉಪಸ್ಥಿತರಿದ್ದರು.

ವಿಶ್ವ ಮಹಿಳಾ ದಿನಾಚರಣೆ

ಸಂಘದ ಪ್ರಯೋಜತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾ ಭವನದಲ್ಲಿ ಮಾ 11,2018 ರಂದು ಕಾರ್ಕಳದ ಉಪನ್ಯಾಸಕಿ ಅಕ್ಷಯಾ ಗೋಖಲೆ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ತಲ್ಲೂರು ಫ್ಯಾಮಿಲಿ ಟ್ರಸ್ಟನ ತಲ್ಲೂರು ಶಿವರಾಮ ಶೆಟ್ಟಿ, ಮಲ್ಪೆ ಲಯನ್ಸ್ ಕ್ಲಬ್ ನ ಆಧ್ಯಕ್ಷೆ ಗಿರಿಜಾ ಶಿವರಾಮ ಶೆಟ್ಟಿ, ಶಂಕರಪುರ ಬಂಟರ ಮಹಿಳಾ ವೇದಿಕೆ ಅಧ್ಯಕ್ಷೆ ವೀಣಾ ಶೆಟ್ಟಿ, ಮಹಿಳಾ ಮಂಡಳಿಗಳ ಒಕ್ಕೂಟದ ವಸಂತಿ ರಾವ್ ಕೊರಡ್ಕಲ್, ರಾಧಾ ದಾಸ್, ಮಮತಾ ಎಸ್. ಶೆಟ್ಟಿ, ಗೀತಾ ರವಿ ಉಪಸ್ಥಿತರಿದ್ದರು